Monday, September 26, 2022

Latest Posts

ಎನ್‌ಐಎ ದಾಳಿ: ಮಂಗಳೂರಿನಲ್ಲಿ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳಿಂದ ಭಾರೀ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ತನ್ನ ದಾಳಿ ಮುಂದುವರಿಸಿದ್ದು, ಮಂಗಳೂರಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಗೋ ಬ್ಯಾಕ್ ಎನ್‌ಐಎ ಎಂದು ಕಾರ್ಯಕರ್ತರು ಪ್ರತಿಭಟಿಸುತ್ತಿದ್ದು, 100 ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ಕಚೇರಿಗಳು, ಮುಖಂಡರ ನಿವಾಸದ ಮೇಲೆ ದಾಳಿ ನಡೆದಿದೆ. ಪಿಎಫ್‌ಐ ಕಚೇರಿ ಇರುವ ನೆಲ್ಲಿಕಾಯಿ ರಸ್ತೆಯಲ್ಲಿ ಸಂಚಾರವನ್ನು ಪೊಲೀಸರು ನಿರ್ಬಂಧಿಸಿದ್ದಾರೆ.

ನಸುಕಿನ 3:30ರ ವೇಳೆಯಿಂದಲೇ ದಾಳಿ ಆರಂಭವಾಗಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆ ನಡೆಸುತ್ತಿದೆ. ಮಂಗಳೂರಿನ ಸ್ಥಳೀಯ ಪೊಲೀಸರು ಉಪಸ್ಥಿತರಿದ್ದು, ಭದ್ರತೆ ಒದಗಿಸಿದ್ದಾರೆ. ಬೆಂಗಳೂರಿನಲ್ಲಿಯೂ ಈವರೆಗೆ ನಾಲ್ಕು ಕಡೆ ದಾಳಿ ನಡೆದಿದ್ದು, ರಿಚ್‌ಮಂಡ್ ಟೌನ್‌ನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಶೋಧ ಕಾರ್ಯ ಜಾರಿಯಲ್ಲಿದೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!