ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ ಹುಬ್ಬಳ್ಳಿ:

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಅನುಷ್ಠಾನ ಹಾಗೂ ಲಿಂಗಾಯತ ಉಪ‌ ಸಮಾಜ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಸೇರಿಸಲು ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಿಸಿ ಹುಬ್ಬಳ್ಳಿಯಲ್ಲಿ‌ ಹಮ್ಮಿಕೊಂಡಿರುವ ಇಷ್ಟಲಿಂಗ ಪೂಜೆ ಸಲ್ಲಿಸುವುದರ ಜೊತೆಗೆ ರಸ್ತೆ ತಡೆದು ಪ್ರತಿಭಟನೆಗೆ ಅಂಗವಾಗಿ ರಾಣಿಚನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಸಲ್ಲಿಸಿ ಚಾಲನೆ ನೀಡಲಾಯಿತು.
ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಮಾಲಾರ್ಪಣೆ ಮಾಡಿದರು. ಚನ್ನಮ್ಮ ವೃತ್ತದಿಂದ ಬೈಕ್ ರ್ಯಾಲಿ ಬಂಕಾಪುರ ಚೌಕನಿಂದ ಸ್ವಾಮೀಜಿ ಪಾದಯಾತ್ರೆ ನಡೆಸಿದರು.

ಕುಂದಗೋಳ ಶಾಸಕ ಎಂ.ಆರ್. ಪಾಟೀಲ, ಪಂಚಮಸಾಲಿ ಮುಖಂಡರಾದ ರಾಜಶೇಖರ ಮೆಣಸಿನಕಾಯಿ, ಸದಾನಂದ ಡಂಗನವರ, ವೀರೇಶ ಉಂಡಿ, ಗೌರಿ ನಾಗರಾಜ ಭಾಗವಹಿಸಿದರು.
ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಮೀಸಲಾತಿಗಾಗಿ ಇಷ್ಟು ಹೋರಾಟ ಮಾಡಿದರು ಸರ್ಕಾರ ಸೌಜನ್ಯಕ್ಕಾದರೂ ನಮ್ಮನ್ನು ಕರೆದು ಮಾತನಾಡಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ನಿಮ್ಮ ಬೆನ್ನಿಗೆ ನಿಂತಿದೆ ಎಂಬುವುದು ಮರೆಯಬಾರದು ಎಂದಎಲಿಂಗಾಯತ ಪಂಚಮಸಾಲಿ ಸಮಾಜವನ್ನು ಯಾವ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಕೆಲ ದುಷ್ಟ ಮನಸ್ಸುಗಳು ನಮಗೆ ಮೀಸಲಾತಿ ಸಿಗದಂತೆ ತಡೆ ಹಿಡಿದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೇಡಿಕೆ ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಲೋಕಸಭಾ ಚುನಾವಣೆಯೊಳಗೆ ಮೀಸಲಾತಿ ಹಾಗೂ ಲಿಂಗಾಯತ ಉಪಜಾತಿಗಳ ಕೇಂದ್ರ ಸರ್ಕಾರ ಒಬಿಸಿ ಪಟ್ಟಿಗೆ ಸೇರಿಸಬೇಕು. ಸಮಾಜಕ್ಕೆ ಯಾವ ಪಕ್ಷ ಮಾನ್ಯತೆ ನೀಡುತ್ತದೆಯೋ ಅವರನ್ನು ಗೆಲ್ಲಿಸುತ್ತೇವೆ. ನ್ಯಾಯ ಒದಗಿಸುವವರ ವಿರುದ್ಧ ಅಸಮಾಧಾನ ಗೊಳ್ಳುವುದು ನಮ್ಮ ಸಮಾಜಕ್ಕೆ ಇದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!