ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಿದ ಬೆನ್ನಲ್ಲೇ, ದಾವಣಗೆರೆ, ಮೈಸೂರು, ಚಿಕ್ಕಬಳ್ಳಾಪುರದಲ್ಲಿ ಹೋರಾಟಗಾರರು ಪ್ರತಿಭಟನೆಗೆ ಇಳಿದಿದ್ದಾರೆ.
ಕನ್ನಡ ಪರ ಸಂಘಟನೆಗಳ ಪ್ರಮುಖರ ನೇತೃತ್ವದಲ್ಲಿ 11.30ಕ್ಕೆ ಟೌನ್ ಹಾಲ್ನಿಂದ ಫ್ರೀಡಂಪಾರ್ಕ್ವರೆಗೆ ಸಾವಿರಾರು ಸಂಖ್ಯೆಯಲ್ಲಿ ಮೆರವಣಿಗೆ ನಡೆಸಲು ನಿರ್ಧಾರ ಮಾಡಲಾಗಿದೆ. ಇದಾದ ಬಳಿಕ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡಲು ಬೃಹತ್ ವೇದಿಕೆ ಸಿದ್ಧವಾಗಿದೆ. ಸದ್ಯ ಟೌನ್ ಹಾಲ್ ಮೆರವಣಿಗೆಗೆ ಪೊಲೀಸರು ಅನುಮತಿ ನೀಡಿದ್ದಾರೆ. ಟೌನ್ ಹಾಲ್ ಬಳಿ ಬರುವ ಪ್ರತಿಭಟನೆಕಾರರನ್ನ ಪೊಲೀಸರು ವಶಕ್ಕೆ ಪಡೆದು, ಬಳಿಕ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನಕಾರರನ್ನ ಬಿಡುವ ಸಾಧ್ಯತೆ ಇದೆ.
ಈಗಾಗಲೇ ಪೊಲೀಸರು ಮೆರವಣಿಗೆ ಮಾಡದಂತೆ ಸಂಘಟನೆಯ ಪ್ರಮುಖರೆಲ್ಲರಿಗೂ ನೋಟಿಸ್ ನೀಡಿದ್ದಾರೆ. ಏನಾದ್ರೂ ಮೆರವಣಿಗೆಯಲ್ಲಿ ಭಾಗಿಯಾದ್ರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಎಚ್ಚರಿಕೆ ನೀಡಿದ್ದಾರೆ. ಇನ್ನೂ, ಮಧ್ಯಾಹ್ನದ ವೇಳೆಗೆ ಬೆಂಗಳೂರಿನ ಪ್ರಮುಖ ಭಾಗಗಳಲ್ಲಿ ಪ್ರತಿಭಟನಾ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಟ್ರಾಫಿಕ್ ಸಮಸ್ಯೆ ಆಗಲಿದೆ. ಹೀಗಾಗಿ ಜಿಸಿ ರೋಡ್, ಟೌನ್ ಹಾಲ್, ಕಾರ್ಪೊರೇಷನ್, ಮೆಜೆಸ್ಟಿಕ್ ಸುತ್ತ ಮುತ್ತ ಟ್ರಾಫಿಕ್ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ.