ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ ಸಂಘದಿಂದ ಸಿಎಂ ನಿವಾಸದ ಮುಂದೆ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ ಹುಬ್ಬಳ್ಳಿ:

ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ ಸಂಘ ವತಿಯಿಂದ ಅ. 10 ರಂದು ಬೆಳಿಗ್ಗೆ 11:30 ಕ್ಕೆ ಬೆಂಗಳೂರಿನ ಮುಖ್ಯಮಂತ್ರಿ ನಿವಾಸ ಮುಂದೆ ಬೃಹತ್ ಪ್ರತಿಭಟನಾ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಹನಮಂತಪ್ಪ ಎಸ್. ಇಟಗಿ ಎಂದು ಹೇಳಿದರು.

ಸರ್ಕಾರಿ ನೌಕಕರರಿಗೆ ಸರಿಸಮಾನ ವೇತನ ಪರಿಷ್ಕರಣೆ ಮಾಡುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದರು ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸ್ಪಂದಿಸಿಲ್ಲ. ಈಗ ಮನವಿ ಸಲ್ಲಿಸಿ 33 ತಿಂಗಳಾದರು ಸಹ ಸರ್ಕಾರ ಪರಿಷ್ಕರಣೆಗೆ ಮುಂದಾಗುತ್ತಿಲ್ಲ ಎಂದು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನಿವೃತ್ತಿ, ನಿಧನ, ಸ್ವಯಂ ನಿವೃತ್ತಿ ಪಡೆದವರಿಗೆ ಬಾಕಿ ಹಣ ಬಿಡುಗಡೆ ಮಾಡಬೇಕು. ಕೊರೋನಾ ಸಮಯದಲ್ಲಿ ಅಮಾಯಕ ಕಾರ್ಮಿಕರ ಕೆಲಸದಿಂದ ವಜಾ ಮಾಡಲಾಗಿದೆ. ಅವರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳಬೇಕು. ಏಕರೂಪ ಶಿಸ್ತು ಕ್ರಮ ಜಾರಿಗೆ ತರಬೇಕು. ಎರಡು ಹಂತದ ಆಡಳಿತ ವ್ಯವಸ್ಥೆ ಜಾರಿ ತರಬೇಕು ಎಂಬ ಬೇಡಿಕೆಗೆ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

ಸರ್ಕಾರ ಅ. 19 ರೊಳಗೆ ಸರ್ಕಾರ ಸಂಘದ ಪದಾಧಿಕಾರಿಗಳ ಜೊತೆ ಸಭೆ ಕರೆದು ಬೇಡಿಕೆ ಈಡೇಸಬೇಕು. ಇಲ್ಲವಾದಲ್ಲಿ ಬೃಹತ್ ಧರಣಿ ನಡೆಸಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ‌ ನೀಡಿದರು. ಸಂಘದ ಅಧ್ಯಕ್ಷ ಈಶ್ವರ ಕಪ್ಪತ್ತನವರ, ಎಚ್.ಬಿ. ದೊಡ್ಡಮನಿ, ಮಂಜುನಾಥ ರುಕ್ಮಣ್ಣವರ, ಮಲ್ಲಿಕಾರ್ಜುನ ಹುನಗುಂದ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!