ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀಡಿ, ಗುಟ್ಕಾ ಬೇಕು ಎಂದು ಕಲಬುರಗಿ ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿಗಳು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
70 ಕ್ಕೂ ಹೆಚ್ಚು ಕೈದಿಗಳು ಪ್ರತಿಭಟಿಸಿದ್ದಾರೆ. ಜೈಲಿನಲ್ಲಿ ಏಕಾಏಕಿ ಎಲ್ಲವೂ ಬಂದ್ ಮಾಡಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಮುಸ್ತಾಫಾ ಎನ್ನುವ ಕೈದಿಯ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ರಾಜ್ಯದಲ್ಲಿರುವ ಜೈಲುಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲ ವಸ್ತುಗಳನ್ನು ಜೈಲಿನಲ್ಲಿ ಮಾರಾಟ ಮಾಡದಂತೆ ಕ್ರಮವಹಿಸಲಾಗಿದೆ.