ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಡಿ.ಕೆ.ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ರದ್ದು ಮಾಡುವ ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ವಿರೋಧಿಸಿ ನ. ೨೫ರಂದು ಬೆಳಿಗ್ಗೆ 10 ಗಂಟೆಗೆ ಬಿಜೆಪಿ ವತಿಯಿಂದ ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದರು, ಮಾಜಿ ಸಚಿವರು, ಶಾಸಕರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಸರಕಾರದ ಕಾನೂನುಬಾಹಿರ ಹಾಗೂ ತಪ್ಪು ನಿರ್ಧಾರ ಖಂಡಿಸಿ ಈ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.