November 12, 2026
Thursday, November 12, 2026
spot_img

ಖಮೇನಿ ತವರಿನಲ್ಲೇ ಭಾರೀ ಪ್ರತಿಭಟನೆ, ಇರಾನ್‌ನಲ್ಲಿ ಇಂಟರ್‌ನೆಟ್‌ ಬಂದ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಇರಾನ್‌ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಈಗ 12 ದಿನಕ್ಕೆ ಕಾಲಿಟ್ಟಿದ್ದು ಇಂಟರ್‌ನೆಟ್‌ ಸೇವೆಯನ್ನು ಬಂದ್‌ ಮಾಡಲಾಗಿದೆ.

ಇರಾನ್‌ನಿಂದ ಗಡಿಪಾರು ಆಗಿರುವ ಯುವರಾಜ ರೇಜಾ ಪಹ್ಲವಿ ಗುರುವಾರ ನಂತರ ಸಾಮೂಹಿಕ ಪ್ರತಿಭಟನೆಗೆ ಕರೆ ನೀಡಿದ ಬೆನ್ನಲ್ಲೇ ತಡರಾತ್ರಿ ಟೆಹರಾನ್‌ ಮತ್ತು ಇತರ ನಗರಗಳಲ್ಲಿ ಸಾವಿರಾರು ಜನರು ಬೀದಿಗಿಳಿದು ಖಮೇನಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ಮುಲ್ಲಾಗಳೇ ದೇಶಬಿಟ್ಟು ತೊಲಗಿ ಎಂದು ಜನರು ಘೋಷಣೆ ಕೂಗಿ ಟೆಹರಾನ್‌ನಲ್ಲಿರುವ ಸರ್ಕಾರಿ ಕಚೇರಿಗೆ ಬೆಂಕಿ ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಇಸ್ಲಾಮಿಕ್ ಗಣರಾಜ್ಯದ 47 ವರ್ಷಗಳ ಇತಿಹಾಸದಲ್ಲಿ ಅತಿ ದೊಡ್ಡ ಆಡಳಿತ ವಿರೋಧಿ ಪ್ರತಿಭಟನೆ ಇದಾಗಿದೆ.

ಇರಾನ್‌ ಸರ್ವೋಚ್ಚ ನಾಯಕ ಖಮೇನಿಯವರ ತವರು ಮತ್ತು ಅವರ ಆಂತರಿಕ ವಲಯದಿಂದ ಬಿಗಿಯಾಗಿ ನಿಯಂತ್ರಿಸಲ್ಪಡುವ ನಗರವಾದ ಮಷಾದ್‌ನಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಪ್ರಮುಖ ನಗರಗಳಲ್ಲಿ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚುವ ಮೂಲಕ ಪ್ರತಿಭಟನೆಗೆ ಸಾಥ್‌ ನೀಡಿದ್ದಾರೆ.

Must Read