ಹೊಸದಿಗಂತ ಡಿಜಿಟಲ್ ಡೆಸ್ಕ್:
ಧಾರವಾಡ ಭೇಟಿಗೆ ಅವಕಾಶ ನೀಡುವಂತೆ ಕೋರಿದ್ದ ಶಾಸಕ ವಿನಯ್ ಕುಲಕರ್ಣಿ ಗೆ ಭಾರೀ ಹಿನ್ನಡೆಯಾಗಿದ್ದು, ಕೋರ್ಟ್ ಅರ್ಜಿಯನ್ನು ನಿರಾಕರಿಸಿದೆ.
ಜೂನ್ 20 ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಭೇಟಿಗೆ ಅವಕಾಶ ನೀಡಬೇಕೆಂದು ಶಾಸಕ ವಿನಯ್ ಕುಲಕರ್ಣಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಆದರೆ ಧಾರವಾಡ ಭೇಟಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಕೋರ್ಟ್ ತಿಳಿಸಿದೆ.
ಈ ಹಿಂದೆ ಸುಪ್ರೀಂಕೋರ್ಟ್ ಕೂಡ ಅನುಮತಿ ನಿರಾಕರಿಸಿದೆ. ಯೋಗಿಶ್ ಗೌಡ ಕೊಲೆ ಪ್ರಕರಣದ ಸಾಕ್ಷಿಯ ತಾಯಿ ನಗರ ಪಾಲಿಕೆ ಸದಸ್ಯರು. ಶಾಸಕರಾದ ಮೇಲೆ ವಿನಯ್ ಕುಲಕರ್ಣಿ ಮತ್ತಷ್ಟು ಪ್ರಭಾವಿಯಾಗಿದ್ದಾರೆ. ಹೀಗಾಗಿ ಧಾರವಾಡ ಭೇಟಿಗೆ ಅನುಮತಿ ನೀಡದಂತೆ ಸಿಬಿಐ ಎಸ್ ಪಿ ಗಂಗಾಧರ್ ಅವರು ಕೋರ್ಟ್ ಗೆ ಮನವಿ ಮಾಡಿದ್ದಾರೆ.