ಬಂದ್‌ ಹಿನ್ನೆಲೆ 491 ರೈಲುಗಳ ರದ್ದು, ದೆಹಲಿಯಲ್ಲಿ ಭಾರೀ ಟ್ರಾಫಿಕ್‌ ಜಾಮ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸೇನೆಯಲ್ಲಿ ನಾಲ್ಕು ವರ್ಷ ಸೇವೆ ಸಲ್ಲಿಸಲು ಕೇಂದ್ರ ಸರ್ಕಾರ ತಂದಿರುವ ‘ಅಗ್ನಿಪಥ್’ ಯೋಜನೆ ವಿರೋಧಿಸಿ ಸೋಮವಾರ ಭಾರತ್ ಬಂದ್‌ಗೆ ಕರೆ ನೀಡಿವೆ. ಬಂದ್ ಹಿನ್ನೆಲೆಯಲ್ಲಿ 491 ರೈಲುಗಳನ್ನು ರದ್ದುಗೊಳಿಸಲಾಗಿದೆ. ಇದರಲ್ಲಿ 229 ಎಕ್ಸ್‌ಪ್ರೆಸ್ ಮತ್ತು 254 ಪ್ಯಾಸೆಂಜರ್ ರೈಲುಗಳು ಸೇರಿವೆ. ಭಾರತ್ ಬಂದ್ ಹಿನ್ನೆಲೆಯಲ್ಲಿ ಬಂಗಾಳ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಹೌರಾ ನಿಲ್ದಾಣ, ಹೌರಾ ಸೇತುವೆ, ಸಂತ್ರಗಚಿ ಜಂಕ್ಷನ್ ಮತ್ತು ಶಾಲಿಮಾರ್ ರೈಲು ನಿಲ್ದಾಣದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ತೆಲುಗು ರಾಜ್ಯಗಳಲ್ಲೂ ರೈಲು ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ರೈಲುಗಳು ರದ್ದಾದ ಹಿನ್ನೆ ದೆಹಲಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು, ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ದೆಹಲಿ-ಗುರುಗ್ರಾಮ್ ಎಕ್ಸ್ ಪ್ರೆಸ್ ವೇನ ಸರ್ಹೌಲ್ ಗಡಿ, ನೋಯ್ಡಾ-ದೆಹಲಿ ರಸ್ತೆ ಸೇರಿದಂತೆ ಹಲವೆಡೆ ಭಾರೀ ಟ್ರಾಫಿಕ್‌ನಿಂದಾಗಿ ಪ್ರಯಾಣಿಕರು ವಾಹನ ಸವಾರರು ಪರದಾಡುವಂತಾಗಿದೆ.

ಜಾರ್ಖಂಡ್‌ನ ಎಲ್ಲಾ ಶಾಲೆಗಳನ್ನು ಮುಚ್ಚಲಾಗಿದೆ. ಪ್ರಸ್ತುತ 9 ಮತ್ತು 11ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬಿಹಾರ ಸರ್ಕಾರವು ಸುಮಾರು 20 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಅದೇ ರೀತಿ ಪಂಜಾಬ್ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ಜೈಪುರ ಮತ್ತು ನೋಯ್ಡಾದಲ್ಲಿ ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದಾರೆ.  ಬಂದ್ ಹೆಸರಿನಲ್ಲಿ ವಿಧ್ವಂಸಕ ಕೃತ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆರ್‌ಪಿಎಫ್‌ನ ಎಲ್ಲಾ ಘಟಕಗಳಿಗೆ ಸೂಚಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!