ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ನಡೆಯಲಿದೆ.
ಪಶ್ಚಿಮ ಬಂಗಾಳದ ಮೂರು ಲೋಕಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯಲಿದೆ. ಮತದಾನ ಭರದಿಂದ ಸಾಗುತ್ತಿದೆ. ಬೆಳಗ್ಗೆ 9 ಗಂಟೆ ವೇಳೆಗೆ ಶೇ 15ರಷ್ಟು ಮತದಾನವಾಗಿದೆ ಎಂದು ವರದಿಯಾಗಿದೆ.
ಬದಲಾದ ರಾಜಕೀಯ ಸಮೀಕರಣದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ I.N.D.I.A ಮೈತ್ರಿಕೂಟದ ನಡುವೆ ಈ ಬಾರಿ ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ.