October 12, 2026
Monday, October 12, 2026
spot_img

WEATHER | ರಾಜ್ಯಕ್ಕೆ ಮುಂಗಾರಿನ ಮಸ್ತ್‌ ಎಂಟ್ರಿ, ಈ ಭಾಗಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಕ್ಕೆ ಮುಂಗಾರು ಕಾಲಿಟ್ಟಿದ್ದು, ಮಳೆಯ ಅಬ್ಬರ ಜೋರಾಗಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆ ಸುರಿಯಲಿದೆ.

ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅವಾಂತರ ಸೃಷ್ಟಿಯಾಗುವ ಸಾಧ್ಯತೆ ಇದ್ದು, ಜಾಗರೂಕತೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಕೂಡ ಹೆಚ್ಚಿರಲಿದ್ದು, ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.

ಬೆಳಗಾವಿ, ಧಾರವಾಡ, ಗದಗ ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು ಹಾಗೂ ಚಿಕ್ಕಬಳ್ಳಾಪುರಕ್ಕೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಹಾಗೂ ನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

Must Read