‘SIMI’ ಸಂಘಟನೆಗೆ ಮಾಸ್ಟರ್ ಸ್ಟ್ರೋಕ್: ಮತ್ತೆ 5 ವರ್ಷ ನಿಷೇಧ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಟೂಡೆಂಟ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ(SIMI) ಉಗ್ರ ಸಂಘಟನೆ ಮೇಲೆ ಹೇರಲಾಗಿದ್ದ ನಿಷೇಧವನ್ನು ಕೇಂದ್ರ ಸರಕಾರ ಮತ್ತೆ ವಿಸ್ತರಿಸಿದೆ .

ಮುಂದಿನ 5 ವರ್ಷಗಳ ಕಾಲ ಈ ಉಗ್ರ ಸಮಿ ಸಂಘಟನೆಯ್ನು ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ(UAPA) ಅಡಿಯಲ್ಲಿ ನಿಷೇಧಿಸಲಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ಹೊಂದಿರುವ ನರೇಂದ್ರ ಮೋದಿ ಸರ್ಕಾರ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ ಉಗ್ರ ಸಂಘಟನೆ ಮೇಲಿನ ನಿಷೇಧವನ್ನು ಮುಂದಿನ 5 ವರ್ಷಗಳಿಗೆ ವಿಸ್ತರಿಸಲಾಗುತ್ತಿದೆ. UAPA ಕಾಯ್ದೆಯಡಿಯಲ್ಲಿ ಈ ಸಂಘಟನೆಯನ್ನು ಕಾನೂನು ಬಾಹಿರ ಚಟವಟಿಕೆ ನಡೆಸುತ್ತಿರುವ ಸಂಘಟನೆ ಎಂದು ಘೋಷಿಸಲಾಗಿದೆ. ಭಾರತದ ಸಾರ್ವಭೌಮತೆ, ಭದ್ರತೆ ಹಾಗೂ ಸಮಗ್ರತೆಗೆ ಧಕ್ಕೆ ತರುವಲ್ಲಿ ಹಾಗೂ ದೇಶದಲ್ಲಿ ಭಯೋತ್ಪಾದನೆಯನ್ನು ಪ್ರಚೋದಿಸಿ ಶಾಂತಿ ಹಾಗೂ ಕೋಮು ಸೌಹಾರ್ಧತೆಗೆ ಧಕ್ಕೆ ತಂದಿರುವ ಸಿಮಿ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಟ್ವೀಟ್ ಮಾಡಿದೆ.

1977ರಲ್ಲಿ ಸಿಮಿ ಉಗ್ರ ಸಂಘಟನೆ ಆಲಿಘಡದಲ್ಲಿ ಹುಟ್ಟಿಕೊಂಡಿತು. ಉಗ್ರ ಚಟುವಟಿಕೆಗಳ ಮೂಲಕ ದೇಶದಲ್ಲಿ ಹಿಂಸೆ, ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಸಿಮಿ ಸಂಘಟನೆಯನ್ನು 2001ರಲ್ಲಿ ನಿಷೇಧಿಸಲಾಯಿತು. ಆದರೆ 2008ರ ಮುಂಬೈ ದಾಳಿ ಬೆನ್ನಲ್ಲೇ ಸಮಿ ಸಂಘಟನೆ ಮೇಲಿನ ನಿಷೇಧವನ್ನು ವಾಪಸ್ ಪಡೆಯಲಾಗಿತ್ತು. ಆದರೆ ಆಗಸ್ಟ್ 6, 2008ರಲ್ಲಿ ಭಾರತದ ಮುಖ್ಯನ್ಯಾಯಮೂರ್ತಿ ಸಿಮಿ ಸಂಘಟನೆಯನ್ನು ಮತ್ತೆ ನಿಷೇಧಿಸಿದ್ದರು. 2019ರ ಆರಂಭದಲ್ಲಿ ನಿಷೇಧದ ಅವಧಿ ಅಂತ್ಯಗೊಂಡಿತ್ತು. ಇದಕ್ಕೂ ಮೊದಲೇ ಅಂದರೆ ಫೆಬ್ರವರಿ 6, 2019ರಂದು ಸಿಮಿ ಸಂಘಟನೆ ನಿಷೇಧ ವಿಸ್ತರಿಸಲಾಗಿತ್ತು. ಇದೀಗ ಮತ್ತೆ 5 ವರ್ಷಗಳ ಕಾಲಕ್ಕೆ ಸಿಮಿ ಸಂಘಟನೆಯನ್ನು ನಿಷೇಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!