ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಲವು ದಿನಗಳನ್ನು ಜೈಲಿನಲ್ಲಿ ಕಳೆಯುತ್ತಿದ್ದಾರೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ದುರ್ಬಲರಾಗಿರುವ ದರ್ಶನ್ ಅಧ್ಯಾತ್ಮದತ್ತ ಒಲವು ತೋರಿದ್ದಾರೆ. ಪ್ರತ್ಯಕ್ಷದರ್ಶಿಗಳು ಅವರ ದಿನಚರಿಯ ಬಗ್ಗೆ ಮಾಹಿತಿ ಹಂಚಿಕೊಂಡರು.
ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರ ದಿನಚರಿಯನ್ನು ಪ್ರತ್ಯಕ್ಷದರ್ಶಿಗಳು ವಿವರಿಸಿದಂತೆ ದರ್ಶನ್ ಅವರು ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಅರ್ಧ ಗಂಟೆ ಧ್ಯಾನ ಮಾಡ್ತಾರಂತೆ.
ಬೆಳಗ್ಗೆ ಆರರಿಂದ ಏಳರವರೆಗೆ ದರ್ಶನ್ ವಾಕಿಂಗ್ ಮಾಡ್ತಾರಂತೆ. ಉಪಾಹಾರದ ನಂತರ ಅವರು ಆಧ್ಯಾತ್ಮಿಕ ಪುಸ್ತಕಗಳನ್ನು ಓದುತ್ತಾರೆ. ಅವರ ಬಳಿ ಹದಿನಾರು ಪುಸ್ತಕಗಳನ್ನು ಇಟ್ಟುಕೊಂಡಿದ್ದಾರೆ ಎಂದು ಹೇಳಲಾಗುತ್ತದೆ. ವಿಶೇಷವೆಂದರೆ ಅವುಗಳಲ್ಲಿ ಹೆಚ್ಚಿನವು ಆಧ್ಯಾತ್ಮಿಕ ಪುಸ್ತಕಗಳಾಗಿವೆ.
ಸ್ವಾಮಿ ವಿವೇಕಾನಂದ, ರಾಮಕೃಷ್ಣ ಪರಮಹಂಸ, ಭಗವದ್ಗೀತೆ ಸಂಬಂಧಿಸಿದ ಪುಸ್ತಕ ಓದುತ್ತಿದ್ದಾರೆ ಎನ್ನಲಾಗಿದೆ. ಯಾವುದೇ ಸಿಬ್ಬಂದಿಯ ಜೊತೆಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಜೈಲು ಸಿಬ್ಬಂದಿ ಮಾಹಿತಿ ನೀಡಿದ್ದಾರೆ.