ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶ ತಂಡವು ಕೂಚ್ ಬೆಹಾರ್ ಟ್ರೋಫಿ ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ.
ವಲ್ಸಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದಪಂದ್ಯದಲ್ಲಿ ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವಲ್ಲಿ ಮಧ್ಯಪ್ರದೇಶ ಯಶಸ್ವಿಯಾಯಿತು.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 216 ರನ್ ಕಲೆಹಾಕಿತು. ಉತ್ತರವಾಗಿ ಮಧ್ಯಪ್ರದೇಶ ತಂಡವು 178 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಇತ್ತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದ್ದ ಗುಜರಾತ್ ತಂಡವು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 133 ರನ್‌ಗಳಿಗೆ ಆಲೌಟ್ ಆಯಿತು. ಅಂತಿಮವಾಗಿ ಗುರಿ ಬೆನ್ನಟ್ಟಿದ ಮಧ್ಯಪ್ರದೇಶ ತಂಡವು 4 ವಿಕೆಟ್‌ಗಳಿಗೆ 176 ರನ್ ಕಲೆಹಾಕುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿತು. ಮಧ್ಯಪ್ರದೇಶದ ಗೆಲುವಿನ ನಾಯಕ ಆಲ್‌ರೌಂಡರ್ ಯಶವರ್ಧನ್ ಸಿಂಗ್ ಚೌಹಾಣ್, ಪಂದ್ಯದಲ್ಲಿ 8 ವಿಕೆಟ್‌ಗಳನ್ನು ಕಬಳಿಸಿದ್ದರು.


