ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಗ್ಲೆಂಡ್ ಮತ್ತು ಭಾರತ ನಡುವಿನ 4ನೇ ಟೆಸ್ಟ್ ಪಂದ್ಯಕ್ಕೆ ಐತಿಹಾಸಿಕ ಮ್ಯಾಂಚೆಸ್ಟರ್ ಕ್ರೀಡಾಂಗಣ ಸಜ್ಜಾಗಿದ್ದು, ಉಭಯ ತಂಡಗಳು ಹಲವು ಬದಲಾವಣೆ ಮಾಡಿಕೊಂಡಿವೆ.
ಇದೀಗ ನಡೆಯುತ್ತಿರುವ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯಲ್ಲಿ ಆತಿಥೇಯ ಇಂಗ್ಲೆಂಡ್ ತಂಡವು 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಇಂಗ್ಲೆಂಡ್ ಸರಣಿ ಗೆಲ್ಲಲು ಇನ್ನೊಂದು ಗೆಲುವಿನ ಅಗತ್ಯವಿದೆ.
ಆದ್ರೆ ಭಾರತ ಸರಣಿ ಗೆಲ್ಲಲು ಇನ್ನುಳಿದ ಎರಡೂ ಪಂದ್ಯಗಳನ್ನೂ ಗೆಲ್ಲಬೇಕಾದ ಅನಿವಾರ್ಯತೆ ಇದೆ. 4ನೇ ಟೆಸ್ಟ್ ಪಂದ್ಯ ಇಂದಿನಿಂದ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 3:30ಕ್ಕೆ ಪಂದ್ಯ ಶುರುವಾಗಲಿದೆ.