ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಥುರಾ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಬಣ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ ಹೊರ ಹಾಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತೀರ್ಪು ಕಾಯ್ದಿರಿಸಿದ್ದ ನ್ಯಾ. ಮಯಾಂಕ್ ಕುಮಾರ್ ಜೈನ್ ಇಂದು ಮುಸ್ಲಿಂ ಪರ ಅರ್ಜಿಯನ್ನು ವಜಾಗೊಳಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ ಹಿಂದು ಪರ ವಕೀಲ ವಿಷ್ಣು ಶಂಕರ್ ಜೈನ್, ಪ್ರತಿವಾದಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಇಚ್ಛಿಸಿದ್ದಲ್ಲಿ ಅದನ್ನು ಎದುರಿಸಲೂ ನಾವು ಸಿದ್ಧ ಎಂದಿದ್ದಾರೆ.
ಇಂದು ಅಲಹಾಬಾದ್ ಹೈಕೋರ್ಟ್ ಶಾಹಿ ಈದ್ಗಾ ಮಸೀದಿ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದೆ ಮತ್ತು ಮಸೀದಿ ತೆರವು ಕೋರಿ ಹಿಂದು ಪರ ದಾವೆಗಳ ವಿಚಾರಣೆಗೆ ಕೋರ್ಟ್ ಒಪ್ಪಿಗೆ ನೀಡಿದೆ. ವಿಚಾರಣೆಯನ್ನು ದಿನಾಂಕ ಆಗಸ್ಟ್ 12ಕ್ಕೆ ಮುಂದೂಡಲಾಗಿದೆ. ನಾವು ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಸುತ್ತೇವೆ ಮತ್ತು ಶಾಹಿ ಈದ್ಗಾ ಮಸೀದಿ ಸುಪ್ರೀಂಕೋರ್ಟ್ ಅನ್ನು ಸಂಪರ್ಕಿಸಿದರೆ, ನಾವು ಅಲ್ಲಿ ಹಾಜರಾಗುತ್ತೇವೆ ಎಂದಿದ್ದಾರೆ.