ಮೌಲಾನಾ ಆಜಾದ್ ಮಾದರಿ ಶಾಲೆ : 6ನೇ ತರಗತಿ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅಲ್ಪಸಂಖ್ಯಾರ ಕಲ್ಯಾಣ ಇಲಾಖೆ ವತಿಯಿಂದ ಕುಶಾಲನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗೆ 2023-24ನೇ ಸಾಲಿನ 6ನೇ ತರಗತಿ ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು ಹೀಗಿವೆ :

ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಸರ್ಕಾರದ ಅಥವಾ ಅಂಗೀಕೃತ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷ ಮೀರಿರಬಾರದು.

ಅರ್ಜಿ ಸಲ್ಲಿಕೆ :

ವಿದ್ಯಾರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೇರಿ, ಸಂಬಂಧಪಟ್ಟ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಅರ್ಜಿ ನಮೂನೆಗಳನ್ನು ಪಡೆದುಕೊಳ್ಳಬಹುದು.

ನಂತರ ಜಾತಿ, ಆದಾಯ ಪ್ರಮಾಣ ಪತ್ರದ ಪ್ರತಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ನಿಗದಿಪಡಿಸಿದ ದಿನಾಂಕದೊಳಗೆ ಸಲ್ಲಿಸಬೇಕು.

ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ್ ಮಾದರಿ ಶಾಲೆ, ಕುಶಾಲನಗರ, ಕುಶಾಲನಗರ ತಾಲೂಕು ಇವರನ್ನು ಭೇಟಿ ಮಾಡಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!