ಕೇಂದ್ರ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಗರಿಷ್ಠ ಅನುದಾನ: ಅರುಣ್ ಸಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಸಹಿತ ವಿವಿಧ ಯೋಜನೆಗಳ ಮೂಲಕ ಕರ್ನಾಟಕಕ್ಕೆ ಗರಿಷ್ಠ ಅನುದಾನ ಲಭಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಜೆಟ್‍ನಲ್ಲಿ ಕರ್ನಾಟಕಕ್ಕೆ ವಿಶೇಷ ಆದ್ಯತೆ ಲಭಿಸಿದೆ. ರೈಲ್ವೆಯ ಹಲವು ಯೋಜನೆಗಳಿಗೂ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರವು ಹಣ ನೀಡಲಿದೆ ಎಂದರು.

ಈಗಾಗಲೇ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕರ್ನಾಟಕದಲ್ಲಿ ತ್ವರಿತಗತಿಯಲ್ಲಿ ಕೆಲಸ ಆಗುತ್ತಿದೆ. ಗರಿಷ್ಠ ಮನೆಗಳ ನಿರ್ಮಾಣಕ್ಕೆ ನೆರವು ಲಭಿಸಲಿದೆ. ಜಲಜೀವನ್ ಮಿಷನ್‍ನಲ್ಲೂ ವೇಗವಾಗಿ ಕೆಲಸ ನಡೆಯುತ್ತಿದೆ. ಈ ಮೂಲಕ ಜನರಿಗೆ ಹೆಚ್ಚು ಪ್ರಯೋಜನ ಸಿಗಲಿದೆ. ಮನೆಮನೆಗೆ ನೀರು ಸರಬರಾಜಾಗಲಿದೆ ಎಂದು ತಿಳಿಸಿದರು. ಇದಕ್ಕಾಗಿ ಪ್ರಧಾನಿ ಮೋದಿ ಸರಕಾರಕ್ಕೆ ಧನ್ಯವಾದಗಳು ಎಂದು ತಿಳಿಸಿದರು.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಇದೆ. ಅದನ್ನು ಪರಿಹರಿಸಲು ವಿಶೇಷ ಅನುದಾನ ಕೊಟ್ಟಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದರು.

ಇದೇ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿ ಎಲ್ಲರ ಗಮನ 150 ಸೀಟು ಗೆಲ್ಲುವ ಕಡೆ ಇರಲಿದೆ ಎಂದು ಅವರು ತಿಳಿಸಿದರು. ಕರ್ನಾಟಕದಲ್ಲಿ ಸಂಪೂರ್ಣ ಬಹುಮತದಿಂದ ಸರಕಾರ ರಚಿಸುವುದೇ ನಮ್ಮೆಲ್ಲರ ಆದ್ಯತೆ ಆಗಲಿದೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!