Friday, June 2, 2023

Latest Posts

ಮೇ 4, 6 ರಂದು ಕಾಂಗ್ರೆಸ್ ಪರ ರಮ್ಯಾ ಮತಯಾಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಪಕ್ಷದಿಂದ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದ ನಟಿ ರಮ್ಯಾ ಈ ಭಾರಿ ಕಾಂಗ್ರೆಸ್‌ನ ಹಲವು ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.

ಚುನಾವಣೆ ಸಂದರ್ಭ ಜನರ ಮತಗಳನ್ನು ತನ್ನತ್ತ ಸೆಳೆಯುವ ಸಲುವಾಗಿ ವಿವಿಧ ಪಕ್ಷಗಳು ಸ್ಟಾರ್ ಪ್ರಚಾರಕರನ್ನು ಕರೆತಂದು ಭರ್ಜರಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿವೆ. ಈಗಾಗಲೇ ಸುದೀಪ್, ದರ್ಶನ್, ಶಿವರಾಜ್ ಕುಮಾರ್ ಸೇರಿದಂತೆ ಹಲವು ನಟ, ನಟಿಯರು ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಇದೀಗ ಸ್ಯಾಂಡಲ್ ವುಡ್ ಸ್ಟಾರ್ ನಟಿ ರಮ್ಯಾ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.

ಮೇ 4ರಂದು ರಮ್ಯಾ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ರಮ್ಯಾ ಪ್ರಚಾರ ನಡೆಸಲಿದ್ದಾರೆ.

ಮೇ 6ರಂದು ಬಬಲೇಶ್ವರ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿರುವ ರಮ್ಯಾ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಪರ ಮತಯಾಚಿಸಲಿದ್ದಾರೆ. ನಂತರ ಬೆಂಗಳೂರಿನ ಸರ್ವಜ್ಞ ನಗರದಲ್ಲಿ ಕೆ.ಜೆ.ಜಾರ್ಜ್ ಪರ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!