ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮಾಜಿ ಪ್ರಧಾನಿ ದೇವೇಗೌಡರ ಜನ್ಮದಿನ, ರಾಜಕೀಯ ಗಣ್ಯರು ಗೌಡರ ಜನ್ಮದಿನಕ್ಕೆ ಶುಭ ಕೋರುತ್ತಿದ್ದು, ಸಿದ್ದರಾಮಯ್ಯ ಕೂಡ ಟ್ವೀಟ್ ಮೂಲಕ ಶುಭಾಷಯ ಕೋರಿದ್ದಾರೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಹಿರಿಯ ನಾಯಕರಾದ ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳು. ನಿಮಗೆ ದೇವರು ದೀರ್ಘಾಯುಷ್ಯ ಮತ್ತು ಆರೋಗ್ಯ ಕರುಣಿಸಲಿ. ರಾಜ್ಯದ ನೆಲ, ಜಲ ಹಾಗೂ ಭಾಷೆಯ ಹಿತಾಸಕ್ತಿಗೆ ಸಾಕಷ್ಟು ದುಡಿದಿದ್ದೀರಿ. ನಿಮ್ಮ ಮಾರ್ಗದರ್ಶನ ಸದಾ ನಮಗೆ ಅತ್ಯಾವಶ್ಯ ಎಂದಿದ್ದಾರೆ.