Saturday, November 1, 2025

ಕನ್ನಡಿಗರು ಸದಾ ಸಂತೋಷವಾಗಿ, ಆರೋಗ್ಯವಾಗಿ ಇರಲಿ: ಶುಭಕೋರಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ.

ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಆವರೂ ಕೂಡ ಕನ್ನಡದಲ್ಲೇ ಪೋಸ್ಟ್ ಮಾಡಿದ್ದು, ಕರ್ನಾಟಕದ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯವು ಸದಾ ಸಮೃದ್ಧಿ ಮತ್ತು ವೈಭವದೊಂದಿಗೆ ಅಭಿವೃದ್ಧಿ ಪಥದತ್ತ ಸಾಗಲಿ ಎಂದು ಹೇಳಿದ್ದಾರೆ.

ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಸುವರ್ಣ ಕರ್ನಾಟಕ ವರ್ಷಚಾರಣೆಯನ್ನು ಜನೋತ್ಸವವಾಗಿ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ.

error: Content is protected !!