ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಎಂಎಲ್ ಸಿ ಸಿ.ಟಿ.ರವಿ ಪ್ರಾರ್ಥಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ” ಎಂದಿದ್ದಾರೆ.
ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜ ಹಟ್ಟಿಹೊಳಿ ಗಾಯಗೊಂಡಿದ್ದಾರೆ. ಇಬ್ಬರಿಗೂ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.