ಮತ್ತೊಮ್ಮೆ ಪ್ರಧಾನಿಯಾಗಲಿ ಮೋದಿ: ಅಮರನಾಥ ಯಾತ್ರೆ ಮಾಡಿ ವಿಶೇಷ ಪೂಜೆ ಸಲ್ಲಿಸಿದ ಶೋಭಾ ಕರಂದ್ಲಾಜೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೋದಿ ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿಯುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರು ಅಮರನಾಥ ಯಾತ್ರೆ (Amarnath Yatra) ಕೈಗೊಂಡು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ವೀಡಿಯೋ ಸಮೇತ ಮಾಹಿತಿ ಹಂಚಿಕೊಂಡ ಅವರು, ಅಮರನಾಥ ದರುಶನ ಪಡೆದು ಧನ್ಯಳಾಗಿದ್ದೇನೆ. ದೇಶವಾಸಿಗಳ ಯೋಗಕ್ಷೇಮ ಮತ್ತು ನರೇಂದ್ರ ಮೋದಿ (Narendra Modi) ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಮತ್ತೆ ಪ್ರಧಾನಿಯಾಗಬೇಕು ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದ್ದಾರೆ.

ಅಮರನಾಥದಲ್ಲಿರುವ ಪವಿತ್ರ ಶಿವಲಿಂಗದ ದರುಶನ ಪಡೆದೆ. ನನ್ನ ಯಾತ್ರೆಗೆ ಸಹಕಾರಿಯಾದ ಅಮರನಾಥ ದೇಗುಲ ಮಂಡಳಿಯ ಎಲ್ಲಾ ಸಿಬ್ಬಂದಿ ಮತ್ತು ಭದ್ರತಾ ತಂಡಕ್ಕೆ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here