ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಹ್ಮದಾಬಾದ್’ನಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಧವಾರ ಹಾರೈಸಿದ್ದಾರೆ.
ಮೋದಿ ಜೀ, ಇಂತಹ ಕಷ್ಟದ ಸಮಯದಲ್ಲಿ ನಾನು ನಿಮಗೆ ನನ್ನ ಪ್ರೀತಿ ಮತ್ತು ಬೆಂಬಲ ನೀಡುತ್ತೇನೆ. ನಿಮ್ಮ ತಾಯಿ ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿಯವರ ತಾಯಿಯನ್ನು ಪ್ರಸ್ತುತ ಯುಎನ್ ಮೆಹ್ತಾ ಆಸ್ಪತ್ರೆಯ ಹೃದ್ರೋಗ ಮತ್ತು ಸಂಶೋಧನಾ ಕೇಂದ್ರದಲ್ಲಿ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.
एक मां और बेटे के बीच का प्यार अनन्त और अनमोल होता है।
मोदी जी, इस कठिन समय में मेरा प्यार और समर्थन आपके साथ है। मैं आशा करता हूं आपकी माताजी जल्द से जल्द स्वस्थ हो जाएं।
— Rahul Gandhi (@RahulGandhi) December 28, 2022