ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಅಧಿಕ ಕೊರೋನಾ ಸೋಂಕು ಇರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೇ 18, 20ರಂದು ಸಮಾಲೋಚಿಸಲಿದ್ದಾರೆ.
ಸರ್ಕಾರದ ಮೂಲಗಳ ಪ್ರಕಾರ, ಮೊದಲ ದಿನ 9 ರಾಜ್ಯಗಳ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎರಡನೇ ದಿನ 10 ರಾಜ್ಯಗಳ 54 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಪ್ರಧಾನಿ ಚರ್ಚಿಸಲಿದ್ದಾರೆ. ಸಂವಹನದ ವೇಳೆ ಆಯಾ ರಾಜ್ಯಗಳ ಮುಖ್ಯಮಂತ್ರಿ ಕೂಡಾ ಭಾಗವಹಿಸುವರು.