ಹೊಸದಿಗಂತ ಡಿಜಿಟಲ್ ಡೆಸ್ಕ್:
ಈದ್-ಉಲ್-ಫಿತರ್ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಶುಭಾಶಯ ತಿಳಿಸಿದ್ದು, ಈ ಹಬ್ಬವು ಸಮಾಜದಲ್ಲಿ ಭರವಸೆ, ಸಾಮರಸ್ಯ ಮತ್ತು ದಯೆಯ ಮನೋಭಾವ ಹೆಚ್ಚಿಸಲಿ ಎಂದು ಹಾರೈಸಿದ್ದಾರೆ.
ಈದ್-ಉಲ್-ಫಿತರ್ ಪವಿತ್ರ ರಂಜಾನ್ ತಿಂಗಳ ಅಂತ್ಯವನ್ನು ಸೂಚಿಸುವ ಹಬ್ಬವಾಗಿದೆ. ಈ ದಿನ ಜಗತ್ತಿನೆಲ್ಲೆಡೆ ಹಬ್ಬವನ್ನು ಮುಸ್ಲಿಮರು ಸಂಭ್ರಮದಿಂದ ಆಚರಿಸುತ್ತಾರೆ. ಪರಸ್ಪರ ಶುಭಾಶಯ ವಿನಿಯಮ, ಸೇರಿದಂತೆ ಪ್ರಾರ್ಥನೆಯಲ್ಲಿ ತೊಡಗುತ್ತಾರೆ.
ಈ ಕುರಿತು ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, ಈದ್-ಉಲ್-ಫಿತರ್ ಹಬ್ಬದ ಶುಭಾಶಯಗಳು. ಈ ಹಬ್ಬ ಎಲ್ಲ ಸಂತೋಷ ಮತ್ತು ಯಶಸ್ಸು ತರಲಿ. ಈದ್ ಮುಬಾರಕ್ ಎಂದು ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ನಾಡಿನ ಜನತೆಗೆ ಈದ್ – ಉಲ್ – ಫಿತರ್ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದು, ಈ ಈದ್-ಉಲ್-ಫಿತರ್ ಸಹೋದರತ್ವ ಹೆಚ್ಚಿಸಿ, ಸಹಾನುಭೂತಿ ಮತ್ತು ದಾನವನ್ನು ಉತ್ತೇಜಿಸುತ್ತದೆ ಎಂದಿದ್ದಾರೆ.