ಹೊಸ ದಿಗಂತ ವರದಿ, ಮಂಡ್ಯ:
ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗೆ ಜಿಲ್ಲೆಗೆ ಬಿಡುಗಡೆ ಯಾಗಿರುವ ಅನುದಾನ ನಷ್ಟವಾಗದಂತೆ ಸಂಪೂರ್ಣವಾಗಿ ಸದ್ಬಳಕೆಯಾಗಬೇಕು. ಅನುದಾನ ನಷ್ಟವಾಗದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವಥಿರವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂ ಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಬುಡಕಟ್ಟು ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜನವರಿ ಮಾಹೆಯ ರಾಜ್ಯ ಮತ್ತು ಜಿಲ್ಲಾ ವಲಯದಲ್ಲಿ ಕಾರ್ಯಕ್ರಮ ಅನುಷ್ಠಾನಗೊಳ್ಳುತ್ತಿರುವ ಎಲ್ಲ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಕೆಲವು ಇಲಾಖೆಗಳು ಎಸ್ಸಿಪಿ ಯೋಜನೆಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡಿದ್ದು, ಆದರೆ ಟಿಎಸ್ಪಿಯ ಅನುದಾನ ಸಮರ್ಪಕವಾಗಿ ಸದ್ಬಳಕೆಯಾಗಿಲ್ಲ. ಕೂಡಲೇ ಟಿಎಸ್ಪಿಯ ಅನುದಾನ ಸದ್ಬಳಕೆಯಾಗಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.