ಹೊಸದಿಗಂತ ಆನ್ಲೈನ್ ಡೆಸ್ಕ್:
ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟಗೊಂಡು ಆರು ಮಂದಿ ಮೃತಪಟ್ಟಿದ್ದು, ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ್ದು, ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣದಲ್ಲಿ ಆರು ಮಂದಿ ಮೃತಪಟ್ಟಿದ್ದು ಸಾಕಷ್ಟು ನೋವು ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಹಾಗೂ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.