October 10, 2026
Saturday, October 10, 2026
spot_img

ನಿಮ್ಮ ಸಾಧನೆ ಯುವ ಜನರಿಗೆ ಸ್ಫೂರ್ತಿಯಾಗಲಿ: ನಟ ವಿಜಯ್ ಗೆಲುವಿಗೆ ರಿಷಬ್ ಶೆಟ್ಟಿ ಅಭಿನಂದನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ರಾಜಕೀಯದಲ್ಲಿ ಹೊಸ ಬದಲಾವಣೆ ತಂದ ನಟ ದಳಪತಿ ವಿಜಯ್ ಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದ್ದು, ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಶುಭ ಕೋರಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ 108 ಸ್ಥಾನಗಳನ್ನು ಗೆಲುವು ಸಾಧಿಸುವ ಮೂಲಕ ಆಡಳಿತದ ಗದ್ದುಗೆಗೆ ಏರಲು ಸಿದ್ಧತೆ ನಡೆಸುತ್ತಿದೆ. ನಟನಿಂದ ರಾಜಕೀಯದತ್ತದ ವಿಜಯ್ ನಡೆಗೆ ಅನೇಕ ಸೆಲೆಬ್ರಿಟಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ರಿಷಬ್ ಶೆಟ್ಟಿ, ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಯುಗ ಪ್ರಾರಂಭಿಸುವ ವಿಜಯ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಮುಂದಾಳತ್ವದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಮತ್ತಷ್ಟು ಆಗಲಿ. ಯುವ ಜನರಿಗೆ ನಿಮ್ಮ ಈ ಸಾಧನೆ ಸ್ಫೂರ್ತಿಯಾಗಲಿ’ ಎಂದು ಶುಭ ಹಾರೈಸಿದ್ದಾರೆ.

ನಟ ಶಿವರಾಜ್​ಕುಮಾರ್ ,ನಾನಿ, ವಿಜಯ್ ದೇವರಕೊಂಡ, ಶಿವಕಾರ್ತಿಕೇಯನ್, ಟೈಗರ್ ಶ್ರಾಫ್, ರವಿತೇಜ, ಚಿರಂಜೀವಿ, ಮಹೇಶ್ ಬಾಬು ಸಹಿತ ಅನೇಕ ಸೆಲೆಬ್ರಿಟಿಗಳು ದಳಪತಿ ವಿಜಯ್ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Must Read