‘ಮಹಾ’ ಮಳೆಗೆ ತತ್ತರಿಸಿದ ಮಾಯಾ ನಗರಿ: 24 ಗಂಟೆಗಳ ಕಾಲ ಹೈ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಮುಂಬೈನಲ್ಲಿ ಕಳೆದ ಒಂದು ವಾರದಿಂದ ಸತತವಾಗಿ ಭಾರೀ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗಲಿದ್ದು, 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ.
ಜನರು 24 ಗಂಟೆಗಳ ಕಾಲ ತಮ್ಮ ಪ್ರಯಾಣದ ಪ್ಲ್ಯಾನ್ ಅನ್ನು ಬದಲಾಯಿಸಿಕೊಳ್ಳುವಂತೆ ಸೂಚನೆ ನೀಡಿದೆ. ಈಗಾಗಲೇ ಮುಂಬೈನ ಕೆಲ ಉಪನಗರಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. 40-50 ಕಿಲೋ ಮೀಟರ್ (KM) ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ಕೆಲವೊಂದು ರೈಲು ಓಡಾಟದ ವೇಳಾ ಪಟ್ಟಿಯನ್ನು ಬದಲಾಯಿಸಲಾಗಿದೆ.
ಕೆಲವು ಉಪನಗರ ರೈಲುಗಳು ವೇಳಾಪಟ್ಟಿಯಲ್ಲಿ ಬದಲಾವಣೆ
ಇಂದು ಬೃಹನ್‍ಮುಂಬೈ ಎಲೆಕ್ಟ್ರಿಕ್ ಸಪ್ಲೈ ಅಂಡ್ ಟ್ರಾನ್ಸ್‍ಪೋರ್ಟ್(BEST) ಬಸ್ ಸೇವೆ ಎಂದಿನಂತೆ ಇತ್ತು. ಸ್ಥಳೀಯ ರೈಲುಗಳು ಸಹ ಇಂದು ಎಂದಿನಂತೆ ಕಾರ್ಯಾಚರಣೆ ನಡೆಸಿವೆ. ಆದ್ರೆ ಮುಂಬೈನ ಕೆಲವು ಉಪನಗರ ರೈಲುಗಳ ವೇಳಾಪಟ್ಟಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿದ್ದಾರೆ.
ಮುಂಬೈ, ಥಾಣೆ, ಪಾಲ್ಘರ್ ಜೆಲ್ಲೆಗಳಲ್ಲೂ ಒಂದು ವಾರದಿಂದ ವರುಣನ ಆರ್ಭಟ ಜೋರಾಗಿದೆ. ಆದ ಕಾರಣ ಭಾರತೀಯ ಹವಾಮಾನ ಇಲಾಖೆ ಇಲ್ಲೂ ಕೂಡ ರೆಡ್ ಅಲರ್ಟ್ ಘೋಷಿಸಿದೆ. ಇನ್ನೂ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆಯಂತೆ. ಇನ್ನೂ 2, 3 ದಿನ ಮಳೆಯಾಗೋ ಸಾಧ್ಯತೆ ಇದೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆ ಜನ ನಗರದ ಬೀಚ್ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಬೀಚ್‍ಗಳಿಗೆ ಭೇಟಿ ನೀಡುವುದನ್ನು ಬೃಹನ್‍ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ( BMC) ನಿಷೇಧಿಸಿ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!