ಪಂಜಾಬ್ ಕಿಂಗ್ಸ್ ತಂಡಕ್ಕೆ ಕನ್ನಡಿಗ ಮಯಾಂಕ್ ಅಗರ್ವಾಲ್ ಕ್ಯಾಪ್ಟನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಲವು ದಿನಗಳಿಂದ ಪಂಜಾಬ್ ಕಿಂಗ್ಸ್ ತಂಡದ ಕ್ಯಾಪ್ಟನ್ ಯಾರಾಗಲಿದ್ದಾರೆ ಎನ್ನುವ ವಿಷಯ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಪಂಜಾಬ್ ತಂಡದ ಕ್ಯಾಪ್ಟನ್ ಘೋಷಣೆಯಾಗಿದ್ದು, ಕನ್ನಡಿಗ ಮಯಾಂಕ್ ಅಗರ್ವಾಲ್ ತಂಡವನ್ನು ಮುನ್ನಡೆಸಲಿದ್ದಾರೆ.

ಕೆ.ಎಲ್. ರಾಹುಲ್ ಬಳಿಕ ಇದೀಗ ಮತ್ತೋರ್ವ ಕನ್ನಡಿಗನಿಗೆ ಕ್ಯಾಪ್ಟನ್ ಪಟ್ಟ ಸಿಕ್ಕಿದೆ. ಹರಾಜು ಪ್ರಕ್ರಿಯೆಯಲ್ಲಿ 8.25 ಕೋಟಿಗೆ ಪಂಜಾಬ್ ಕಿಂಗ್ಸ್ ಪಾಲಾಗಿದ್ದ ಶಿಖರ್ ಧವನ್ ಪಂಜಾಬ್‌ನ ಕ್ಯಾಪ್ಟನ್ ಆಗಬಹುದು ಎನ್ನಲಾಗಿತ್ತು. ಆದರೆ ಇದೀಗ ಮಯಾಂಕ್ ಅಗರ್ವಾಲ್ ಕ್ಯಾಪ್ಟನ್ ಎಂದು ತಂಡ ಅಧಿಕೃತ ಘೋಷಣೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!