ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಜಗದೀಪ್‌ ಧನಕರ್‌ಗೆ ಮಾಯಾವತಿ ಬೆಂಬಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ (ಬಿಎಸ್‌ಪಿ) ಹಾಗೂ ಉತ್ತರ ಪ್ರದೇಶದ ಮಾಜಿ ಸಿಎಂ ಮಾಯಾವತಿ ಅವರು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್‌ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಆಗಸ್ಟ್ 6 ರಂದು ಉಪ ರಾಷ್ಟ್ರಪತಿ ಆಯ್ಕೆಗೆ ಮತದಾನ ನಡೆಯಲಿದೆ. ಸಾರ್ವಜನಿಕ ಹಿತಾಸಕ್ತಿ ಮತ್ತು ನಮ್ಮ ಪಕ್ಷದ ಸಿದ್ಧಾಂತಗಳನ್ನು ಗಮನದಲ್ಲಿಟ್ಟುಕೊಂಡು ಈ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಜಗದೀಪ್ ಧನಕರ್ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದೇವೆ. ಇದನ್ನು ಅಧಿಕೃತವಾಗಿ ಘೋಷಿಸುತ್ತಿದ್ದೇನೆ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿದೆ. ಲೋಕಸಭೆ ಮತ್ತು ರಾಜ್ಯಸಭೆಯ 788 ಸದಸ್ಯರು ನೂತನ ಉಪರಾಷ್ಟ್ರಪತಿಯವರನ್ನು ಆಯ್ಕೆ ಮಾಡಲಿದ್ದಾರೆ. ಉಪರಾಷ್ಟ್ರಪತಿ ಚುನಾವಣೆಯಲ್ಲೂ ಎನ್‌ಡಿಎ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಇದೆ. ಈ ಚುನಾವಣೆಯಲ್ಲಿ ಮಾರ್ಗರೇಟ್ ಆಳ್ವ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಈ ಬಾರಿಯೂ ಸಹ ಹಲವು ಪ್ರಾದೇಶಿಕ ಪಕ್ಷಗಳು ಬಿಜೆಪಿಗೆ ಬೆಂಬಲ ನೀಡುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!