ಈಶ್ವರಪ್ಪ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ಪಾಲಿಕೆಯಲ್ಲಿ ಮಹತ್ತರ ಬೆಳವಣಿಗೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ದಿನೇ ದಿನೇ ಸಾಕಷ್ಟು ಬೆಳವಣಿಗೆಯಾಗುತ್ತಿದೆ. ಮಂಗಳವಾರ ಬಿಜೆಪಿ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಕೈ ತಪ್ಪಿದ ಟಿಕೆಟ್ ಆಕಾಂಕ್ಷಿಗಳು ಬಂಡಾಯ ಎದ್ದಿದ್ದಾರೆ. ಈ ನಡುವೆ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಈಶ್ವರಪ್ಪನವರು ಚುನಾವಣೆಯಿಂದ ಹಿಂದೆ ಸರಿದಿರುವುದಕ್ಕೆ ಕಾರ್ಯಕರ್ತರು, ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಪಾಲಿಕೆ ಬಿಜೆಪಿ ಸದಸ್ಯರು ಪಕ್ಷದ ವಿವಿಧ ಜವಾಬ್ದಾರಿಗಳಿಗೆ ಸಾಮೂಹಿಕ‌ವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಮೇಯರ್, ಉಪಮೇಯರ್ ಸೇರಿದಂತೆ 19 ಸದಸ್ಯರು ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಅಲ್ಲದೆ ಬೆಂಗಳೂರಿಗೆ ತೆರಳಿ ಯಡಿಯೂರಪ್ಪರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ.

ಶಿವಮೊಗ್ಗದ ಬಿಜೆಪಿ ಜಿಲ್ಲಾ ಕಚೇರಿ ಎದುರು ಕಾರ್ಯಕರ್ತರು ಮತ್ತು ಈಶ್ವರಪ್ಪ ಆಭಿಮಾನಿಗಳು ಧರಣಿ ಮಾಡಿದ್ದಾರೆ. ಬಿಜೆಪಿ ಕಚೇರಿಯ ಮುಂಭಾಗದ ದೀನ ದಯಾಳ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!