Friday, June 2, 2023

Latest Posts

ರಕ್ಷಿತ್​ ಶೆಟ್ಟಿ ನಿರ್ಮಾಣದ ಚಿತ್ರಕ್ಕೆ ಎಂಟ್ರಿ ಕೊಟ್ಟ ಮಯೂರಿ ನಟರಾಜ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

‘ಗುರುದೇವ್ ಹೊಯ್ಸಳ’ ಸಿನಿಮಾದಲ್ಲಿ ತಮ್ಮ ನಟನೆಯ ಮೂಲಕ ಎಲ್ಲರ ಗಮನ ಸೆಳೆದಿದ್ದ ಮಯೂರಿ ನಟರಾಜ್ ಅವರು ಇದೀಗ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ 2ನೇ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ರಕ್ಷಿತ್‌ ಶೆಟ್ಟಿ ನಿರ್ಮಾಣದ ಈ ಸಿನಿಮಾ ಚಿತ್ರೀಕರಣ ಆರಂಭವಾಗಿದ್ದು, ಚಿತ್ರದಲ್ಲಿ ವಿಹಾನ್‌, ಅಂಕಿತಾ ಅಮರ್‌ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಚಿತ್ರಕ್ಕೆ ಮತ್ತೂಬ್ಬ ನಾಯಕಿ ಮಯೂರಿ ನಟರಾಜ್‌ ಅವರ ಎಂಟ್ರಿಯಾಗಿದೆ.

ಕಾವ್ಯಾತ್ಮಕ ಪ್ರೇಮಕಥೆಯ “ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ ಚಂದ್ರಜಿತ್‌ ಬೆಳ್ಳಿಯಪ್ಪ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಶ್ರೀವಾತ್ಸನ್‌ ಸೆಲ್ವರಾಜನ್‌ ಛಾಯಾಗ್ರಹಣ, ರಕ್ಷಿತ್‌ ಕೌ ಸಂಕಲನವಿದೆ. ಗಗನ್‌ ಬಡೇರಿಯಾ ಚಿತ್ರದ ಹಾಡುಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!