ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಡಗು ನಿರ್ಮಾಣ ಸಂಸ್ಥೆಯಾದ ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ (MDL) ನಲ್ಲಿ ಖಾಲಿ ಇರುವ 466 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳು/ವಿಶ್ವವಿದ್ಯಾಲಯಗಳಿಂದ 8ನೇ, 10ನೇ, ITI /ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಟ 14 ರಿಂದ ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 2500/- ರಿಂದ 8050/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 27,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.