ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ದಿನಗಳಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮುಖ್ಯಮಂತ್ರಿಯಾಗಿ ಕೆಲಸ ಮಾಡಲಿದ್ದಾರೆ ಎಂದು ವೀರಶೈವ ಪಂಚಮಸಾಲಿ 3ನೇ ಪೀಠದ ಪೀಠಾಧಿಪತಿ ಜಮಖಂಡಿ ಆಲಗೂರಿನ ಶ್ರೀ ಮಹಾದೇವ ಶಿವಾಚಾರ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಬಬಲೇಶ್ವರ ಪಟ್ಟಣದ ಹೊರವಲಯದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಸ್ವಾಮೀಜಿ ಆಶೀರ್ವಾದ ಮಾಡಿದ್ದಾರೆ. ವಿಜಯಪುರದಲ್ಲಿ ಬರಗಾಲ ಆವರಿಸಿದೆ. ಅದನ್ನು ತೆರವುಗೊಳಿಸಲು ನೀರಾವರಿ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ರೈತರ ಬದುಕನ್ನು ಬಂಗಾರವಾಗಿಸುವ ಬಗ್ಗೆ ಹಾಡಿ ಹೊಗಳಿದ್ದಾರೆ. ನಾವು, ನಮ್ಮವರು, ನಮ್ಮ ಮಹಿಳೆಯರು ಧನ್ಯರು ಎಂದು ಸಿದ್ಧೇಶ್ವರ ಸ್ವಾಮೀಜಿ ಎಂ.ಬಿ.ಪಾಟೀಲ್ ಗೆ ತಿಳಿಸಿದರು.
ಲೋಕಸಭೆ ಚುನಾವಣೆಯ ಮೊದಲ ಕಾಂಗ್ರೆಸ್ ಪಟ್ಟಿಯ ಬಿಡುಗಡೆ ಕುರಿತು ಮಾತನಾಡಿರುವ ಸಚಿವ ಎಂ.ಬಿ.ಪಾಟೀಲ್, ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಕರ್ನಾಟಕದ ವಿಜಯಪುರ ಮೊದಲ ಕ್ಷೇತ್ರದ ಲೋಕಸಭೆ ಟಿಕೆಟ್ ಘೋಷಣೆಯಾಗಿದೆ. ಕಾಂಗ್ರೆಸ್ ಮುಖಂಡ ರಾಜೂ ಆಲಗೂರಗೆ ಮೊದಲ ಟಿಕೆಟ್ ಘೋಷಣೆಯಾಗಿದೆ. ಶಿವರಾತ್ರಿಯ ಶುಭ ದಿನದಂದು ಈ ಘೋಷಣೆ ಮಾಡಲಾಗಿದೆ. ನಮ್ಮ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.