March 25, 2026
Wednesday, March 25, 2026
spot_img

ಆನ್‌ಲೈನ್‌ ಗೇಮ್ಸ್‌ ಚಟಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್‌ ವಿದ್ಯಾರ್ಥಿ: ಕ್ಯಾಂಪಸ್‌ನಲ್ಲಿ ಶೋಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆನ್‌ಲೈನ್‌ ಗೇಮ್‌ನ ಚಟಕ್ಕೆ ಬಿದ್ದಿದ್ದ ಎಂಬಿಬಿಎಸ್‌ ವಿದ್ಯಾರ್ಥಿಯೊಬ್ಬ ಹಣ ಕಳೆದುಕೊಂಡ ನೋವಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೀದರ್‌ನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಂತಿಮ ವರ್ಷದ ವಿದ್ಯಾರ್ಥಿ ಅನಿಷ್ಕಾರ್‌ ಚವಾಣ್‌ ಮೃತರು.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾದ ನಿವಾಸಿ ಅನಿಷ್ಕಾರ್‌ ಆನ್‌ಲೈನ್‌ ಗೇಮ್‌ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಇದರಿಂದ ಮನನೊಂದು ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿ ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದಿದ್ದು, ಸ್ನೇಹಿತನಿಂದ 70,000 ರೂ.ಗಳನ್ನು ಸಾಲವಾಗಿ ಪಡೆದಿದ್ದಾನೆ. ಗೇಮಿಂಗ್ ಚಟದಲ್ಲಿ 80,000 ರೂ.ಗಳನ್ನು ಕಳೆದುಕೊಂಡಿದ್ದಾರೆ. ಇದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆನ್‌ಲೈನ್ ಗೇಮಿಂಗ್‌ಗೆ ಸಂಬಂಧಿಸಿದ ಹಲವಾರು ಸಂದೇಶಗಳು ಆತನ ಫೋನ್ ನಲ್ಲಿ ಕಂಡು ಬಂದಿದೆ.

ಪೋಷಕರು ಈಗಾಗಲೇ ದೂರು ನೀಡಿದ್ದಾರೆ. ಕಷ್ಟಪಟ್ಟು ಮಗನನ್ನು ಓದಿಸಿ ಡಾಕ್ಟರ್‌ ಮಾಡಬೇಕು ಎಂದುಕೊಂಡಿದ್ದು, ಆ ಕನಸು ಇಂದು ನುಚ್ಚುನೂರಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !