ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದಿದೆ.
ಮೋತಿ ಲಾಲ್ ನೆಹರು ವೈದ್ಯಕೀಯ ಕಾಲೇಜಿನಲ್ಲಿ ಮೂರನೇ ವರ್ಷದ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯು, ಹಾಸ್ಟೇಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಶ್ರುತಿ ಶ್ರೀವಾಸ್ತವ್ ಮೃತ ವಿದ್ಯಾರ್ಥಿನಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮೂಲತಃ ಉತ್ತರ ಪ್ರದೇಶದ ಸುಲ್ತಾನ್ ಪುರ ಜಿಲ್ಲೆಯ ವಿದ್ಯಾರ್ಥಿನಿಯು ಎಂಬಿಬಿಎಸ್ ಅಧ್ಯಯನಕ್ಕಾಗಿ ಪ್ರಯಾಗ್ ರಾಜ್ ನಲ್ಲಿದ್ದರು.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಳನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.