ಹಾಸನದಲ್ಲಿ ಡೆಂಗ್ಯೂಗೆ ಎಂಬಿಬಿಎಸ್‌ ವಿದ್ಯಾರ್ಥಿ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಾಸನದಲ್ಲಿ ಡೆಂಗ್ಯೂಗೆ ಎಂಬಿಬಿಎಸ್‌ ವಿದ್ಯಾರ್ಥಿ ಬಲಿಯಾಗಿದ್ದಾನೆ.

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿ, ಗೋಹಳ್ಳಿ ಗ್ರಾಮದ ರೇಖಾ ಮತ್ತು ಮಂಜುನಾಥ್ ದಂಪತಿಯ ಪುತ್ರ ಕುಶಾಲ್ (22) ಮೃತ ವಿದ್ಯಾರ್ಥಿ. ಕಳೆದ ಒಂದು ವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಶಾಲ್ ಗುರುವಾರ ಸಂಜೆ ಮೃತಪಟ್ಟಿದ್ದಾನೆ.

ಕುಶಾಲ್ ತಾಯಿ, ಟೈಲರ್ ವೃತ್ತಿಯಲ್ಲಿದ್ದು, ಅವರೂ ಕೂಡ ಡೆಂಗ್ಯೂ ಸೋಂಕಿನಿಂದ ಬಳಲುತ್ತಿದ್ದಾರೆ. ಆವರೂ ಕೂಡ ಆಸ್ಪತ್ರೆಯಲ್ಲೇ ಒಳರೋಗಿಯಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!