ಮಹಾರಾಷ್ಟ್ರದಲ್ಲಿ ತೀವ್ರ ಜ್ವರದಿಂದ ಎಂಬಿಬಿಎಸ್ ವಿದ್ಯಾರ್ಥಿ ಸಾವು, ಹೆಚ್‌3ಎನ್2 ವೈರಸ್ ಪ್ರಕರಣ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿ (23)ತೀವ್ರ ಜ್ವರದಿಂದ ಮೃತಪಟ್ಟಿದ್ದು, ಹೆಚ್3ಎನ್2 ಶಂಕೆ ವ್ಯಕ್ತವಾಗಿದೆ.

ಅಹ್ಮದ್‌ನಗರದ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಂಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಸ್ನೇಹಿತರೊಂದಿಗೆ ಕೊಂಕಣದ ಅಲಿಬಾಗ್‌ಗೆ ಟ್ರಿಪ್ ತೆರಳಿದ್ದ. ತದನಂತರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತದನಂತರ ಕೋವಿಡ್ ಸೋಂಕು ತಗುಲಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದು, ಅಲ್ಲಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ತೀವ್ರ ಜ್ವರದಿಂದ ಮೃತಪಟ್ಟಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಅವರ ಮರಣೋತ್ತರ ಪರೀಕ್ಷೆಯಲ್ಲಿ ಹೆಚ್3ಎನ್2ಪತ್ತೆಯಾಗಿದೆ ಎನ್ನಲಾಗಿದೆ, ಇದರ ಬಗ್ಗೆ ವೈದ್ಯರು ಅಧಿಕೃತ ಮಾಹಿತಿ ನೀಡಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!