ಹೊಸದಿಗಂತ ವರದಿ, ಮಡಿಕೇರಿ:
ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಎಂಡಿಎಂಎ (Methylenedioxy Methamphetamine) ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕುಂಜಿಲ ನಿವಾಸಿ ನೌಫಲ್ (25 ) ಹಾಗೂ ಎಮ್ಮೆಮಾಡು ಪೈಸಾರಿ ನಿವಾಸಿ ಸಾದಿಕ್ (32) ಎಂಬವರೇ ಬಂಧಿತ ಆರೋಪಿಗಳು.
ನಗರದ ಮಂಗಳೂರು ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿದ ಸೆನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜೆ.ಕೆ.ರಾಘವೇಂದ್ರ ಹಾಗೂ ಸಿಬ್ಬಂದಿಗಳ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಲ್ಲಿದ್ದ 7.46 ಗ್ರಾಂ. ಎಂಡಿಎಂಎ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್ ಅವರು ಶ್ಲಾಘಿಸಿದ್ದಾರೆ.