ಅಮೆರಿಕಾದಲ್ಲಿ ಗುಂಡಿನ ದಾಳಿ: ತೆಲಂಗಾಣದ ಯುವಕ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಮೆರಿಕದ ಮೇರಿಲ್ಯಾಂಡ್‌ನ ಬಾಲ್ಟಿಮೋರ್ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ತೆಲಂಗಾಣದ ನಲ್ಗೊಂಡ ನಿವಾಸಿ ಸಾವನ್ನಪ್ಪಿರುವುದಾಗಿ ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.  ಭಾನುವಾರ ಮುಂಜಾನೆ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಸಾಯಿ ಚರಣ್‌ ಸಾವನ್ನಪ್ಪಿದ್ದಾರೆ. ಸಂಜೆ 4:30 ಕ್ಕೆ ವಾಹನದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಮೇರಿಲ್ಯಾಂಡ್ ಸಾರಿಗೆ ಪ್ರಾಧಿಕಾರದ ಪೊಲೀಸರು ತಿಳಿಸಿದ್ದಾರೆ.

ಹುಂಡೈ ಟಕ್ಸನ್ ಕಾರಿನಲ್ಲಿ ಬಂದ 25 ವರ್ಷದ ಸಾಯಿ ಚರಣೆ ತಲೆಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿರುವುದು ಪತ್ತೆಯಾಗಿದೆ. ತಕ್ಷಣವೇ ಮೇರಿಲ್ಯಾಂಡ್ ವಿಶ್ವವಿದ್ಯಾಲಯದ ಆರ್.ಆಡಮ್ಸ್ ಕೌಲಿಯನ್ನು ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಷ್ಟರಲ್ಲಾಗಲೇ ಯುವಕ ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದರು.

ನಲ್ಗೊಂಡಾದ ನಕ್ಕ ಸಾಯಿ ಚರಣ್ (26) ಎರಡು ವರ್ಷಗಳಿಂದ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾನೆ. ಸ್ನೇಹಿತನನ್ನು ವಿಮಾನ ನಿಲ್ದಾಣದಲ್ಲಿ ಇಳಿಸಿ ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಗುಂಡು ಹಾರಿಸಲಾಗಿದೆ. ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!