ನಾನು-ಡಿಕೆ ಶಿವಕುಮಾರ್ ಒಟ್ಟಾಗಿದ್ದೇವೆ, ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲ: ಸಿದ್ಧರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾನು ಮತ್ತು ಡಿಕೆ ಶಿವಕುಮಾರ್ ಜೊತೆಯಾಗೇ ಇದ್ದೇವೆ.ನನ್ನ ಹಾಗೂ ಡಿಕೆ ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯವಿದೆ. ಅವರಿಗೆ ಸಿದ್ಧರಾಮೋತ್ಸವಕ್ಕೆ ವಿರೋಧವಿದೆ ಎಂಬುದಾಗಿ ಹಲವರು ಹೇಳುತ್ತಿದ್ದರು. ಆದ್ರೇ ಇದೆಲ್ಲಾ ಸುಳ್ಳು ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.
ಇಂದು ದಾವಣಗೆರೆಯಲ್ಲಿ ನಡೆಯುತ್ತಿರುವಂತ 75ನೇ ಹುಟ್ಟು ಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದಂತ ಅವರು ಟ್ಟಾಗಿಯೇ ಮುಂದಿನ ಚುನಾವಣೆ ಎದುರಿಸಲಿದ್ದೇವೆ. ನಮ್ಮ ಉದ್ದೇಶ ಕೋಮುವಾದಿ ಬಿಜೆಪಿ ಈ ರಾಜ್ಯದಿಂದ ಓಡಿಸಿ, ಕಾಂಗ್ರೆಸ್ ಸರ್ಕಾರವನ್ನು ಅಸ್ಥಿತ್ವಕ್ಕೆ ತರೋದೆ ಆಗಿದೆ ಎಂಬುದಾಗಿ ಸ್ಪಷ್ಟ ಪಡಿಸಿದರು.

ಬಿಜೆಪಿಯನ್ನು ಕಿತ್ತೊಗೆಯಬೇಕು. ಮತ್ತೆ ಕಾಂಗ್ರೆಸ್ ಅನ್ನು ಈ ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು. ಇವತ್ತು ರೈತರು, ಬಡವರು, ದಲಿತರು, ಹಿಂದುಳಿದವರ್ಗದವರು, ಅಲ್ಪಸಂಖ್ಯಾತರು, ಮಹಿಳೆಯರು ಭಯದಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ ಈ ದೇಶದ ಜನರು ಅತ್ಯಂತ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಜಾಪ್ರಭುತ್ವ ಇವತ್ತು ಸಂಕಷ್ಟದಲ್ಲಿದೆ. ಸಂವಿಧಾನಕ್ಕೆ ಇವತ್ತು ರಕ್ಷಣೆ ಇಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!