ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಕಲಾವಿದರ ಮೇಲಿನ ಲೈಂಗಿಕ ಕಿರುಕುಳದ ಘಟನೆಗಳ ತನಿಖೆ ಮತ್ತು ವರದಿ ಮಾಡುವ ವಿಷಯದ ಕುರಿತು ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯ ಮಹತ್ವದ ಸಭೆಯು ಸೆಪ್ಟೆಂಬರ್ 16 ರಂದು ನಡೆಯಲಿದೆ.
ಈ ಸಭೆಯಲ್ಲಿ ಚಿತ್ರರಂಗದ ಕಲಾವಿದರು ಮತ್ತು ಪ್ರಮುಖರು ಭಾಗವಹಿಸಲಿದ್ದಾರೆ. ಚಿತ್ರರಂಗದಲ್ಲಿ ಮಹಿಳಾ ಕಲಾವಿದರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆ ಫೈರ್ ನಿಯೋಗ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿತ್ತು.
ರಾಜ್ಯ ಮಹಿಳಾ ಆಯೋಗವು ಚಲನಚಿತ್ರೋದ್ಯಮದಲ್ಲಿ ತೊಡಗಿರುವ ಎಲ್ಲರೊಂದಿಗೆ ಸಭೆ ನಡೆಸುವಂತೆ ವಾಣಿಜ್ಯ ಮಂಡಳಿಗೆ ಸೂಚನೆ ನೀಡಿತ್ತು. ಈ ನಿಟ್ಟಿನಲ್ಲಿ ಸೆಪ್ಟೆಂಬರ್ 16ರಂದು ಸಭೆ ನಡೆಯಲಿದೆ. ಸಿನಿಮಾ ರಂಗದ ಪ್ರಮುಖರ ಜತೆ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎನ್ನಲಾಗಿದೆ.