ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿರುವ ಡೆಡ್ಲಿ ಕೊರೋನಾ ವಿರುದ್ಧದ ಹೋರಾಟದ ಕುರಿತು ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆ ನಡೆಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಸಂಸತ್ತಿನ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಲಸಿಕೆಯನ್ನು ಬಾಹುಗಳಿಗೆ ನೀಡಲಾಗಿದೆ. ಇದರಿಂದ ಲಸಿಕೆ ಪಡೆದ ಜನರಲ್ಲಿ ಕೊರೋನಾ ಮಹಾಮಾರಿಯ ವಿರುದ್ಧ ಹೋರಾಡಲು ತೋಳ್ಬಲ ಹೆಚ್ಚಾದಂತಾಗಿದೆ. ಇದೀಗ ದೇಶದಲ್ಲಿ 40 ಕೋಟಿ ಜನರು ಬಾಹುಬಲಿಗಳಾಗಿದ್ದಾರೆ ಎಂದು ಹೇಳಿದ್ದಾರೆ.
ಕೋವಿಡ್ ವಿರುದ್ಧದ ಹೋರಾಟ ಕುರಿತು ಚರ್ಚಿಸಲು ಸಂಸತ್ ಅಧಿವೇಶನದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಕೊರೋನಾ ದೇಶವನ್ನು ಕಾಡುತ್ತಿರುವ ಮಹಾಪಿಡುಗಾಗಿದೆ ಎಂದರು.