January15, 2026
Thursday, January 15, 2026
spot_img

ಅತ್ತ ಢಾಕಾದಲ್ಲಿ ಭಾರತ ವಿರೋಧಿ ಪ್ರತಿಭಟನೆ…ಮುಸ್ತಾಫಿಜುರ್ ಕೋಟಿ-ಕೋಟಿ ಕೊಟ್ಟ KKR, ಬಿಸಿಸಿಐ ವಿರುದ್ಧ ನೆಟ್ಟಿಗರ ಆಕ್ರೋಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

IPL ಮಿನಿ ಹರಾಜಿನಲ್ಲಿ ಬಾಂಗ್ಲಾದೇಶದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಗೆ ಕೋಲ್ಕತ್ತಾ ನೈಟ್ ರೈಡರ್ಸ್ (KKR) 9.2 ಕೋಟಿಗೆ ತಮ್ಮ ತಂಡಕ್ಕೆ ಸೇರಿಸಿಕೊಂಡಿದೆ.

ಆದ್ರೆ ಇತ್ತ ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಪ್ರತಿಭಟನೆ ನಡೆಯುತ್ತಿದೆ. ಢಾಕಾದಲ್ಲಿ ಇಂದು ಭಾರತದ ವಿರುದ್ಧ ಪ್ರತಿಭಟನೆ ನಡೆಸಿ ಭಾರತೀಯ ರಾಯಭಾರಿ ಕಚೇರಿ ಮೇಲೆ ದಾಳಿ ನಡೆಸಲು ಪ್ರಯತ್ನಿಸಿದ್ದಾರೆ. ಭದ್ರತಾ ಕಾರಣಗಳಿಗಾಗಿ ಭಾರತ ಢಾಕಾದಲ್ಲಿರುವ ವೀಸಾ ಕೇಂದ್ರವನ್ನು ಮುಚ್ಚಿದ್ದರೆ ಭಾರತೀಯ ರಾಯಭಾರಿ ಕಚೇರಿಗೆ ಬೀಗಿ ಭದ್ರತೆ ಕಲ್ಪಿಸುವಂತೆ ಬಾಂಗ್ಲಾದೇಶಕ್ಕೆ ಆಗ್ರಹಿಸಿದೆ.

ಈ ಘಟನೆಗಳ ನಂತರ ನೆಟ್ಟಿಗರು ಬಿಸಿಸಿಐ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಪ್ರತಿಭಟನೆಗಳು ನಡೆಯುತ್ತಿದ್ದರೆ ಇಲ್ಲಿ ಬಾಂಗ್ಲಾ ಆಟಗಾರರಿಗೆ ರೆಡ್ ಕಾರ್ಪೆಟ್ ಹಾಕಿ ಖರೀದಿಸುತ್ತಿದ್ದೀರಾ.. ಇದೇನಾ ನಿಮ್ಮ ದೇಶಭಕ್ತಿ… ಎಂದು ಪ್ರಶ್ನಿಸುತ್ತಿದ್ದಾರೆ.

ಬಾಂಗ್ಲಾದೇಶದ ರಾಜಕೀಯ ರಾಷ್ಟ್ರೀಯ ನಾಗರಿಕ ಪಕ್ಷದ (NCP) ಮುಖ್ಯಸ್ಥ ಹಸ್ನತ್ ಅಬ್ದುಲ್ಲಾ ಭಾರತದ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ . ಇತ್ತೀಚೆಗೆ ಗುಂಪೊಂದು ಭಾರತೀಯ ಹೈಕಮಿಷನರ್‌ಗೆ ಬೆದರಿಕೆ ಹಾಕಿದೆ. ಢಾಕಾದ ಕೇಂದ್ರ ಶಹೀದ್ ಮಿನಾರ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಹಸ್ನತ್ ಅಬ್ದುಲ್ಲಾ, ಬಾಂಗ್ಲಾದೇಶವು ಪ್ರತ್ಯೇಕತಾವಾದಿ ಗುಂಪುಗಳು ಸೇರಿದಂತೆ ಭಾರತ ವಿರೋಧಿ ಶಕ್ತಿಗಳಿಗೆ ಆಶ್ರಯ ನೀಡಬಹುದು. ಭಾರತದ ‘ಸೆವೆನ್ ಸಿಸ್ಟರ್ಸ್’ ಅಂದರೆ ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ತ್ರಿಪುರಗಳನ್ನು ಪ್ರತ್ಯೇಕಿಸುವ ಪ್ರಯತ್ನಗಳಿಗೆ ಸಹಾಯ ಮಾಡಬಹುದು ಎಂದು ಹೇಳಿದ್ದನು. ಈ ಹೇಳಿಕೆ ನಂತರ ಭಾರತ ಮತ್ತು ಬಾಂಗ್ಲಾದೇಶ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ.

Most Read

error: Content is protected !!