ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾದಿಂದ ಕಚ್ಚಾ ತೈಲ ಖರೀದಿ ಮುಂದುವರಿಸಿರುವ ಭಾರತದ ವಿರುದ್ಧ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಸುಂಕಾಸ್ತ್ರ ಪ್ರಯೋಗ ಮಾಡಿದ್ದು, ಮತ್ತೆ ಭಾರತದ ಮೇಲೆ ಹೆಚ್ಚುವರಿ ಶೇ. 25 ರಷ್ಟು ವ್ಯಾಪಾರ ಸುಂಕ ಘೋಷಿಸಿದ್ದಾರೆ. ಇದರೊಂದಿಗೆ ಭಾರತದ ಸರಕುಗಳ ಮೇಲಿನ ಅಮೆರಿಕದ ತೆರಿಗೆಯು ಶೇ. 50 ರಷ್ಟಾಗಿದೆ.
ಇದರ ನಡುವೆ ರಷ್ಯಾದೊಂದಿಗೆ ಸಂಬಂಧ ಗಟ್ಟಿಗೊಳಿಸಲು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಾಸ್ಕೋಗೆ ಭೇಟಿ ಕೊಟ್ಟಿದ್ದಾರೆ.
ರಷ್ಯಾ ಮತ್ತು ಭಾರತದ ಸಂಬಂಧವನ್ನು ಬಲಪಡಿಸುವ ಉದ್ದೇಶದಿಂದಾಗಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ರಷ್ಯಾಕ್ಕೆ ಭೇಟಿ ನೀಡಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ಈ ತಿಂಗಳ ಕೊನೆಯಲ್ಲಿ ರಷ್ಯಾಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ದೋವಲ್ ಅವರ ರಷ್ಯಾ ಭೇಟಿ ಮೊದಲೇ ನಿಗದಿಯಾಗಿತ್ತು. ಆದರೆ ಟ್ರಂಪ್ ಅವರ ಹೇಳಿಕೆಗಳಿಂದಾಗಿ ಇದಕ್ಕೀಗ ಹೆಚ್ಚು ಮಹತ್ವ ಪಡೆದುಕೊಂಡಂತಾಗಿದೆ. ಭಾರತ ಮತ್ತು ರಷ್ಯಾ ನಡುವಿನ ಸಂಬಂಧವನ್ನು ಸುಧಾರಿಸಲು ಈ ಭೇಟಿ ಸಹಾಯ ಮಾಡುತ್ತದೆ. ಅಮೆರಿಕದ ಒತ್ತಡದ ನಡುವೆಯೂ ಭಾರತವು ರಷ್ಯಾದೊಂದಿಗೆ ತನ್ನ ಸಂಬಂಧವನ್ನು ಮುಂದುವರೆಸಲು ಬಯಸಿದೆ ಎಂಬುದನ್ನುತೋರಿಸುತ್ತದೆ.