ಕೇರಳದಲ್ಲಿ ಸದ್ದು ಮಾಡಿದೆ ದಡಾರ: ಒಂದೇ ಜಿಲ್ಲೆಯಲ್ಲಿ ಬರೋಬ್ಬರಿ 130 ಮಂದಿಗೆ ಸೋಂಕು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾಮಾರಿ ದಡಾರ ಈಗ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ.
ಮೂಲಗಳ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಈವರೆಗೆ ಬರೋಬ್ಬರಿ 130 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಸೋಂಕಿತರಲ್ಲಿ 7 ತಿಂಗಳಿಂದ 29 ವರ್ಷದೊಳಗಿನವರು ಸೇರಿದ್ದಾರೆ. ಆದರೆ ಯಾರನ್ನೂ ಇದುವರೆಗೆ ಆಸ್ಪತ್ರೆಗೆ ದಾಖಲಿಸಲಾಗಿಲ್ಲ. ಇನ್ನು ಈ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ತಿರೂರ್ ಹಾಗೂ ಮಲಪಪುರಂ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ದಡಾರ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕಲು ಹೆಚ್ಚಿನ ಲಸಿಕೆಗಳನ್ನು ವಿತರಿಸಲಾಗಿದೆ. ಲಸಿಕೆ ಪಡೆಯದವರಿಗೆ ಮನೆಯಲ್ಲಿಯೇ ಔಷಧಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ರೋಗದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಕೇಂದ್ರ ತಂಡ ಈಗಾಗಲೇ ಆಗಮಿಸಿದ್ದು, ಯಾವ ಪ್ರದೇಶಗಳು ಹೆಚ್ಚು ಬಾಧಿತವಾಗಿವೆ ಎಂಬ ಬಗ್ಗೆ ಮಾಹಿತಿ ಕಲೆಹಾಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!