ಹೊಸದಿಗಂತ ಡಿಜಿಟಲ್ ಡೆಸ್ಕ್
ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ದಡಾರ ಪ್ರಕರಣಗಳ ಸಂಖ್ಯೆ 717ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ಹೆಚ್ಚಾಗಿ ಮಕ್ಕಳ ಮೇಲೆ ಪರಿಣಾಮ ಬೀರುವ ವೈರಲ್ ಸೋಂಕು ಇದುವರೆಗೆ 14 ಜೀವಗಳನ್ನು ಬಲಿ ತೆಗೆದುಕೊಂಡಿದೆ ಎಂದು ಇಲಾಖೆ ತಿಳಿಸಿದೆ. ಮುಂಬೈ ಒಂದರಲ್ಲೇ ನವೆಂಬರ್ 28 ರ ವೇಳೆಗೆ ದಡಾರದಿಂದ 10 ಸಾವುಗಳು ವರದಿಯಾಗಿವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಮುಂಬೈನಲ್ಲಿ ಒಟ್ಟು 303 ಪ್ರಕರಣಗಳು ಪತ್ತೆಯಾಗಿವೆ. ಮಂಗಳವಾರ, ಮುಂಬೈನಲ್ಲಿ ಐದು ಹೊಸ ದಡಾರ ಪ್ರಕರಣಗಳು ಮತ್ತು ಒಂದು ಶಂಕಿತ ಸಾವು ದಾಖಲಾಗಿದೆ ಎಂದು ನಗರದ ನಾಗರಿಕ ಸಂಸ್ಥೆ ಬುಲೆಟಿನ್‌ನಲ್ಲಿ ತಿಳಿಸಿದೆ.
ಜನವರಿಯಿಂದೀಚೆಗೆ ನಾಸಿಕ್ ಜಿಲ್ಲೆಯ ಮಾಲೆಗಾಂವ್ ನಗರದಲ್ಲಿ 70 ಮತ್ತು ಮುಂಬೈ ಸಮೀಪದ ಭಿವಂಡಿಯಲ್ಲಿ 48 ಸೋಂಕಿನ ಪ್ರಕರಣಗಳು ವರದಿಯಾಗಿವೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ನಿಯಮಿತವಾಗಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ