ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………
ಹೊಸ ದಿಗಂತ ವರದಿ, ಮೈಸೂರು:
ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸಲು ತಲಕಾಡನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದರು.
ಸೋಮವಾರ ಸಂಜೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಸೋಮನಾಥಪುರ ಶ್ರೀ ಕೇಶವ ದೇವಾಲಯಕ್ಕೆ ಭೇಟಿ ನೀಡಿದ ಅವರು, ಅಲ್ಲಿ ಕೆಲಕಾಲ ವೀಕ್ಷಣೆ ಮಾಡಿದರು. ಬಳಿಕ ತಲಕಾಡಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಕಾರಣಕ್ಕೆ ತಲಕಾಡನ್ನ ಇನ್ನಷ್ಟು ಅಭಿವೃದ್ಧಿಪಡಿಸಬೇಕಿದೆ. ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಇಲ್ಲಿ ಅಭಿವೃದ್ಧಿ ಮಾಡಲು ತೀರ್ಮಾನ ಮಾಡಲಾಗಿದೆ. ಮೈಸೂರಿಗೆ ಬರುವ ಪ್ರವಾಸಿಗರು ಇಲ್ಲಿಗೂ ಸಹ ಬರುವಂತಾಗಬೇಕು. ಧಾರ್ಮಿಕ ಕೇಂದ್ರವಾಗಿ ಮಾತ್ರ ಅಲ್ಲದೇ ಪ್ರವಾಸಿ ತಾಣವಾಗಿ ಸಹ ಅಭಿವೃದ್ಧಿ ಆಗಬೇಕಿದೆ. ಮೈಸೂರು ಸರ್ಕೂ್ಯಟ್ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಚಿಂತನೆ ಮಾಡಲಾಗಿದೆ. ಆದ್ರೆ ಪೂರಕ ವ್ಯವಸ್ಥೆ ಇಲ್ಲ. ಈ ಹಿನ್ನೆಲೆಯಲ್ಲಿ ಪ್ರತಿವರ್ಷ ತಲಕಾಡು ಗಂಗರ ಉತ್ಸವ ನಡೆಸಲು ನಿರ್ಧಾರ ಮಾಡಲಾಗಿದೆ. ಈ ವರ್ಷವೇ ದಸರಾ ವೇಳೆಗೆ ಗಂಗರ ಉತ್ಸವ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು. ತಲಕಾಡುನಲ್ಲಿ
12 ವರ್ಷಕ್ಕೊಮ್ಮೆ ಪಂಚಲಿoಗ ದರ್ಶನ ಮಾಡಲಾಗುತ್ತಿದೆ. ಪ್ರತಿವರ್ಷ ಗಂಗರ ಉತ್ಸವ ನಡೆಸಿದರೆ ಮೂಲ ಸೌಕರ್ಯ ಅಭಿವೃದ್ಧಿ ಆಗಲಿದೆ. ಈ ಬಗ್ಗೆ ವಿವಿಧ ಇಲಾಖೆಗಳ ಜೊತೆ ಚರ್ಚಿಸಿ ಅನುಮೋದನೆ ಪಡೆಯುತ್ತೇನೆ. ರಾಜ್ಯದಲ್ಲಿ ಸಾಕಷ್ಟು ಪ್ರವಾಸಿ ತಾಣವಿದ್ದರೂ ಶಾಲಾ ಮಕ್ಕಳಿಗೆ ಮೂಲಸೌಕರ್ಯ ಇಲ್ಲ. ನಮ್ಮ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಭೆ ನಡೆಸಿ. ಮೈಸೂರು ಸೇರಿದಂತೆ ರಾಜ್ಯದ ಹತ್ತು ಕಡೆಗಳಲ್ಲಿ ಶಾಲಾ ಮಕ್ಕಳಿಗೆ ಮೂಲ ಸೌಕರ್ಯ ಕಲ್ಪಿಸಲು ಚಿಂತನೆ ಮಾಡಲಾಗಿದೆ. ಸರ್ಕಾರದಿಂದ ಉಚಿತ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸುತ್ತೇವೆ. ಈ ಸಂಬoಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ವಿವಿಧ ಇಲಾಖೆಗಳ ಜೊತೆ ಚರ್ಚೆ ಮಾಡಿ ಅಂತಿಮ ರೂಪುರೇಷೆ ರಚಿಸಲಾಗುತ್ತದೆ ಎಂದು ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದರು.
ಇನ್ನು 15 ದಿನದಲ್ಲಿ ಬೆಂಗಳೂರಿನಲ್ಲಿ ಹೆಲಿಟೂರಿಸಂ ಪ್ರಾರಂಭ:
ಇನ್ನು 15 ದಿನದಲ್ಲಿ ಬೆಂಗಳೂರಿನಲ್ಲಿ ಹೆಲಿಟೂರಿಸಂ ಪ್ರಾರಂಭ ಮಾಡಲಾಗುತ್ತದೆ. ಹೆಲಿಟೂರಿಸಂ ಪ್ರಾರಂಭಕ್ಕೆ ಬಗ್ಗೆ ಪರಿಸರವಾದಿಗಳ ವಿರೋಧವಾಗಿದೆ. ಆದರೆ ವಿಮಾನ ನಿಲ್ದಾಣ ಬಳಕೆ ಮಾಡಿಕೊಂಡು ಪ್ರಾರಂಭ ಮಾಡುತ್ತೇವೆ. ಮೈಸೂರಿನಲ್ಲಿ ಹೆಲಿಟೂರಿಸಂ ಆದಷ್ಟು ಬೇಗ ಪ್ರಾರಂಭವಾಗುತ್ತೆ. ರೂಪುರೇಷೆಗಳನ್ನು ಬದಲಾವಣೆ ಮಾಡಿಕೊಂಡು ಮಾಡುತ್ತೇವೆ ಎಂದು ಹೇಳಿದರು.